ಬೆಂಗಳೂರು :ನಿನ್ನೆ ದೆಹಲಿಯಲ್ಲಿ ಬಂಧನಕ್ಕೊಳಗಾಗಿದ್ದ ಡ್ರಗ್ ಪೆಡ್ಲರ್ ವೀರೇನ್ ಖನ್ನಾನನ್ನು ಚಾಮಾರಾಜಪೇಟೆ ಬಳಿ ಇರುವ ಸಿಸಿಬಿ ಕಚೇರಿಗೆ ವಿಚಾರಣೆಗಾಗಿ ಕರೆತರಲಾಗಿದೆ.
4 ದಿನಗಳ ಕಾಲ ವೀರೇನ್ ಖನ್ನಾನನ್ನು ಕಸ್ಟಡಿಗೆ ಪಡೆದಿರುವ ಸಿಸಿಬಿ ತನಿಖಾಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಕಚೇರಿಗೆ ಕರೆತಂದಿದ್ದಾರೆ. ವೀರೇನ್ ಬೃಹತ್ ಪಾರ್ಟಿಗಳನ್ನು ಆರ್ಗನೈಸ್ ಮಾಡುತ್ತಿದ್ದ. ಅಲ್ಲದೆ ಪಾರ್ಟಿಗೆ ಡ್ರಗ್ ಸಪ್ಲೈ ಮಾಡುತ್ತಿದ್ದ ಆರೋಪದ ಮೇಲೆ ದೆಹಲಿಯಲ್ಲಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.