ಕರ್ನಾಟಕ

karnataka

ETV Bharat / jagte-raho

ಕಲ್ಲಿದ್ದಲು ಹಗರಣ: ಕೇಂದ್ರ ಮಾಜಿ ಸಚಿವ ದಿಲೀಪ್​ ರಾಯ್​​ ದೋಷಿ ಎಂದು ಕೋರ್ಟ್​ ತೀರ್ಪು - ದೆಹಲಿ ವಿಶೇಷ ನ್ಯಾಯಾಲಯ

1999ರ ಜಾರ್ಖಂಡ್​ನ ಕಲ್ಲಿದ್ದಲು ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣ ಸಂಬಂಧ ಕೇಂದ್ರ ಮಾಜಿ ಸಚಿವ ದಿಲೀಪ್​ ರಾಯ್​ ಅಪರಾಧಿ ಎಂದು ದೆಹಲಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

Coal scam
ಮಾಜಿ ಕೇಂದ್ರ ಸಚಿವ ದಿಲೀಪ್​ ರಾಯ್​​ ದೋಷಿ

By

Published : Oct 6, 2020, 11:27 AM IST

ನವದೆಹಲಿ:1999ರ ಕಲ್ಲಿದ್ದಲು ಹಗರಣ ಸಂಬಂಧ ಇದೀಗ ಕೇಂದ್ರ ಮಾಜಿ ಸಚಿವ ದಿಲೀಪ್​ ರಾಯ್​ ಅಪರಾಧಿ ಎಂದು ದೆಹಲಿ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

1999ರ ಜಾರ್ಖಂಡ್​ನ ಕಲ್ಲಿದ್ದಲು ಹಂಚಿಕೆಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಅಂದಿನ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಕಲ್ಲಿದ್ದಲು ರಾಜ್ಯ ಸಚಿವರಾಗಿದ್ದ ದಿಲೀಪ್​ ರಾಯ್ ಅವರ ಪಿತೂರಿ ಇರುವುದು ಸಾಬೀತಾಗಿದೆ.

ಹಗರಣ ಸಂಬಂಧ ತೀರ್ಪು ಪ್ರಕಟಿಸಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಭಾರತ್ ಪರಾಶರ್, ದಿಲೀಪ್​ ರಾಯ್ ಜೊತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಟ್ರಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್​ರನ್ನು ದೋಷಿ​​ಗಳೆಂದು ಹೇಳಿದ್ದಾರೆ.

ಅಕ್ಟೋಬರ್ 14ರಂದು ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣದ ಕುರಿತು ಕೋರ್ಟ್​ ವಿಚಾರಣೆ ನಡೆಸಲಿದೆ.

ABOUT THE AUTHOR

...view details