ಶಿವಮೊಗ್ಗ: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕುಂಚೇನಹಳ್ಳಿಯಲ್ಲಿ ನಡೆದಿದೆ.
ಲಾರಿ-ಬೈಕ್ ಡಿಕ್ಕಿ: ರಸ್ತೆಯಲ್ಲೇ ಪ್ರಾಣ ಬಿಟ್ಟ ದಂಪತಿ - road accident
ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ದಾರುಣವಾಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ದಂಪತಿ
ಮೇಲಿನ ಕುಂಚೇನಹಳ್ಳಿಯ ವಾಲ್ಯಾನಾಯ್ಕ್ (48) ಹಾಗೂ ಸುಮಿಬಾಯಿ (44) ಮೃತಪಟ್ಟ ದಂಪತಿ ಎಂದು ತಿಳಿದು ಬಂದಿದೆ. ಗಾರೆ ಕೆಲಸಕ್ಕೆಂದು ದಂಪತಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಶಿವಮೊಗ್ಗದಿಂದ ಶಿಕಾರಿಪುರ ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಇವರ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ..ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.