ನೋಯ್ಡಾ(ಉತ್ತರ ಪ್ರದೇಶ): ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಸೋಂಕಿತ ವೈದ್ಯನೇ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಕೋವಿಡ್ ಸೋಂಕಿತ ವೈದ್ಯನಿಂದಲೇ ರೋಗಿಗೆ ಲೈಂಗಿಕ ಕಿರುಕುಳ!
ಕೋವಿಡ್ ಸೋಂಕಿತ ಯುವತಿ ಮೇಲೆ ಸೋಂಕು ತಗುಲಿ ಅದೇ ಐಸೋಲೇಷನ್ ವಾರ್ಡ್ನಲ್ಲಿ ದಾಖಲಾಗಿದ್ದ ವೈದ್ಯನೇ ಲೈಂಗಿಕ ಕಿರುಕುಳ ನೀಡಿದ್ದಾನೆ.
ಲೈಂಗಿಕ ಕಿರುಕುಳ
ಸೋಂಕು ದೃಢಪಟ್ಟ ಬಳಿಕ ಯುವತಿಯೋರ್ವಳು ನೋಯ್ಡಾದ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ದಾಖಲಾಗಿದ್ದಳು. ಆಸ್ಪತ್ರೆಯ ವೈದ್ಯನೊಬ್ಬನಿಗೂ ಸೋಂಕು ತಗುಲಿದ್ದು, ಆತ ಕೂಡ ಅದೇ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಈ ವೇಳೆ ವೈದ್ಯನು ಕಿರುಕುಳ ನೀಡಿರುವುದಾಗಿ ಯುವತಿ ಆರೋಪಿಸಿದ್ದಾಳೆ ಎಂದು ಹೆಚ್ಚುವರಿ ಉಪ ಪೊಲೀಸ್ ವರಿಷ್ಠಾಧಿಕಾರಿ ರಣವಿಜಯ್ ಸಿಂಗ್ ತಿಳಿಸಿದ್ದಾರೆ.
ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿದ್ದು, ತಪ್ಪಿತಸ್ಥನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಣವಿಜಯ್ ಸಿಂಗ್ ಹೇಳಿದ್ದಾರೆ.