ಬೆಂಗಳೂರು: ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವಿನ ಸೋಲು - ಗೆಲುವು ಕುರಿತು ಕಟ್ಟಿದ್ದ ಬೆಟ್ಟಿಂಗ್ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಇಂಡಿಯಾ v/s ನ್ಯೂಜಿಲ್ಯಾಂಡ್ ತಂಡದ ಕ್ರಿಕೆಟ್ ಪಂದ್ಯಾವಳಿಗೆ ಬೆಟ್ಟಿಂಗ್: ಆರೋಪಿ ಬಂಧನ - bangalore news
ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ತಂಡಗಳ ಒನ್ ಡೇ ಇಂಟರ್ ನ್ಯಾಷನಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್ ಆಡುತ್ತಿದ್ದ ಸುಭಾಷ್ ಶ್ಯಾಮ್ ಸುಖಾ ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುಭಾಷ್ ಶ್ಯಾಮ್ ಸುಖಾ ಬಂಧಿತ ಆರೋಪಿಯಾಗಿದ್ದು, ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಆರೋಪಿ ಇಂಡಿಯಾ ಮತ್ತು ನ್ಯೂಜಿಲ್ಯಾಂಡ್ ತಂಡಗಳ ನಡುವೆ ನಡೆದ ಒನ್ ಡೇ ಇಂಟರ್ ನ್ಯಾಷನಲ್ ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ತಂಡಗಳ ಸೋಲು ಮತ್ತು ಗೆಲುವಿನ ಬಗ್ಗೆ ಸಾರ್ವಜನಿಕರಿಂದ ಮೊಬೈಲ್ ಆ್ಯಪ್ ಮೂಲಕ ಬೆಟ್ಟಿಂಗ್ ರೆಶ್ಯೂ ನೋಡಿಕೊಂಡು ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ.
ಈ ಮಾಹಿತಿ ತಿಳಿದ ಕೇಂದ್ರ ವಿಭಾಗದ ಪೊಲೀಸರು ದಾಳಿ ನಡೆಸಿ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ಸುಭಾಷ್ನನ್ನು ಬಂಧನ ಮಾಡಿದ್ದಾರೆ. ಅಷ್ಟು ಮಾತ್ರವಲ್ಲದೇ ಕ್ರಿಕೆಟ್ ಬೆಟ್ಟಿಂಗ್ ಸಂಬಂಧಿಸಿದಂತೆ ನಗದು ಮೊಬೈಲ್ ಜಪ್ತಿ ಕೂಡ ಮಾಡಿದ್ದಾರೆ. ಇನ್ನು ಈತನೊಂದಿಗೆ ಹಲವಾರು ಪಂಟರ್ಗಳಿದ್ದು ಅವರಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.