ಕಲಬುರಗಿ:ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಬಳಿ ಇರುವ ಭೀಮಾನದಿಯಲ್ಲಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಭೀಮಾ ನದಿಯಲ್ಲಿ ತೇಲಿ ಬಂತು ಅಪರಿಚಿತ ವ್ಯಕ್ತಿಯ ಶವ..! - ಕಲಬುರಗಿ ಜಿಲ್ಲಾ ಸುದ್ದಿ
ಭೀಮಾನದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು, ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
ಭೀಮಾ ನದಿಯಲ್ಲಿ ತೇಲಿ ಬಂದ ಅಪರಿಚಿತ ವ್ಯಕ್ತಿ ಶವ
ಮೃತದೇಹ ನದಿಯಲ್ಲಿ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಅಫಜಲಪುರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ವ್ಯಕ್ತಿಯ ಗುರುತು ಪತ್ತೆಗೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿಚಾರಿಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.