ಶಿವಮೊಗ್ಗ: ಭದ್ರಾವತಿಯ ಹಳೇ ನಗರ ಹಾಗೂ ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರತ್ಯೇಕ ಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ 2 ಲಕ್ಷದ 48 ಸಾವಿರ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನದಲ್ಲಿ 40 ಗ್ರಾಂ ತೂಕದ 1 ಲಕ್ಷದ 20 ಸಾವಿರ ರೂ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿತ್ತು. ಪ್ರಕರಣವನ್ನು ಭೇದಿಸಿದ ಭದ್ರಾವತಿ ಹಳೆನಗರ ಪೊಲೀಸರು ಭದ್ರಾವತಿಯ ಲೋಯರ್ ಹುತ್ತಾ ನಿವಾಸಿ ವೆಂಕಟೇಶ್ನನ್ನು ಬಂಧಿಸಿ ಆತನಿಂದ 40 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.