ಚಿಕ್ಕೋಡಿ :ಮದ್ಯದ ಅಮಲಿನಲ್ಲಿ ವ್ಯಕ್ತಿಯೋರ್ವ ಕರ್ತವ್ಯನಿರತ ಶಿಕ್ಷಕಿಯರಿಗೆ ನಿಂದಿಸಿ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ.
ಮುಗಳಿ ಗ್ರಾಮದ ರಾಜು ಪಾಟೀಲ ಎಂಬ ವ್ಯಕ್ತಿಯು, ಶಿಕ್ಷಕಿಯರನ್ನು ಬೆನ್ನಟ್ಟಿ ಕುಡಿದ ಅಮಲಿನಲ್ಲಿ ನಿಂದಿಸಲು ಪ್ರಾರಂಭಿಸಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಶಿಕ್ಷಕ ಮಹಾದೇವ ಬಜಂತ್ರಿ ಎಂಬುವರು, ಆ ವ್ಯಕ್ತಿಯನ್ನು ಸಮಾಧಾನಪಡಿಸಲು ಮುಂದಾದಾಗ ಮದ್ಯದ ಅಮಲಿನಲ್ಲಿದ್ದ ರಾಜು ಪಾಟೀಲ, ಶಿಕ್ಷಕನ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಗೊಂಡ ಶಿಕ್ಷಕ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.