ಪ್ರತಾಪಗಢ (ರಾಜಸ್ಥಾನ): ಎಂಟು ವರ್ಷದ ಬಾಲಕಿ ಮೇಲೆ ಅಪರಿಚಿತ ವ್ಯಕ್ತಿಗಳು ಅತ್ಯಾಚಾರವೆಸಗಿದ್ದಲ್ಲದೇ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ರಾಜಸ್ಥಾನದ ಪ್ರತಾಪಗಢ ಜಿಲ್ಲೆಯಲ್ಲಿ ನಡೆದಿದೆ.
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕತ್ತು ಹಿಸುಕಿ ಕೊಲೆಗೈದು ಕಾಮುಕರ ಅಟ್ಟಹಾಸ - 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕತ್ತು ಹಿಸುಕಿ ಕೊಲೆ
ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕಾಮುಕರು ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ, ಆಕೆಯ ಮೃತದೇಹವನ್ನು ನೀರಿಲ್ಲದ ಬಾವಿಗೆ ಎಸೆದು ಪರಾರಿಯಾಗಿದ್ದಾರೆ.
ಅತ್ಯಾಚಾರ
ಶುಕ್ರವಾರ ರಾತ್ರಿ ತನ್ನ ತಾಯಿಯೊಂದಿಗೆ ಮಲಗಿದ್ದ ಬಾಲಕಿಯನ್ನು ಆರೋಪಿಗಳು ಅಪಹರಿಸಿ ಕೃತ್ಯ ಎಸಗಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ನೀರಿಲ್ಲದ ಬಾವಿಗೆ ಎಸೆದು ಪರಾರಿಯಾಗಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸ್ ಅಧಿಕಾರಿ ರವೀಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.