ಕಲಬುರಗಿ:ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ 9 ಜಾನುವಾರುಗಳು ಮೃತಪಟ್ಟ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಚಾಮನೂರು ಗ್ರಾಮದ ಬಳಿ ನಡೆದಿದೆ.
ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು 9 ಜಾನುವಾರುಗಳ ಸಾವು
ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದ ಪರಿಣಾಮ ಬರೋಬ್ಬರಿ 9 ಜಾನುವಾರುಳು ಸಾವನ್ನಪ್ಪಿವೆ. ಘಟನೆಗೆ ಜೆಸ್ಕಾಂ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಗ್ರಾಮಸ್ಥರಿಗೆ ಸೇರಿದ ಹಸುಗಳು ಇವಾಗಿದ್ದು, ಸಾಮೂಹಿಕವಾಗಿ ದನಗಳು ಮೇಯಲು ಹೋದಾಗ ಅವಘಡ ಸಂಭವಿಸಿದೆ. ಹೊಲದಲ್ಲಿ ಜಾನುವಾರುಗಳು ಹುಲ್ಲು ಮೇಯುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಕಡಿದು ದನಗಳ ಮೇಲೆ ಬಿದ್ದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಒಂಭಬತ್ತು ಹಸುಗಳು ಸಾವನ್ನಪ್ಪಿವೆ.
ಘಟನಾ ಸ್ಥಳಕ್ಕೆ ವಾಡಿ ಪಿಎಸ್ಐ ವಿಜಯಕುಮಾರ್ ಬಾವಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸ್ಕಾಂ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಜಾನುವಾರುಗಳ ಮಾಲೀಕರಿಗೆ ಅಪಾರ ಹಾನಿಯಾಗಿದ್ದು ಜೆಸ್ಕಾಂ ಇಲಾಖೆ ಪರಿಹಾರ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.