ಕರ್ನಾಟಕ

karnataka

ETV Bharat / jagte-raho

ವಿದ್ಯುತ್ ತಗುಲಿ ಗುತ್ತಿಗೆ ಕಾರ್ಮಿಕ ಸಾವು - Worker death

ವಿದ್ಯುತ್ ಕಂಬವೇರಿ ರಿಪೇರಿ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿದ ಪರಿಣಾಮ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲೂಕಿನಲ್ಲಿ ನಡೆದಿದೆ.

ಮೃತನ ಸಂಬಂಧಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು

By

Published : Sep 10, 2019, 3:07 AM IST

ಮೈಸೂರು :ವಿದ್ಯುತ್ ತಗುಲಿ ಗುತ್ತಿಗೆ ಕಾರ್ಮಿಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕು ಮಹಾದೇವ ನಗರದಲ್ಲಿ ನಡೆದಿದೆ.

ಬಸವನಾಯಕ (30) ಮೃತ ದುರ್ದೈವಿ. ಬಸವನಾಯಕ, ವಿದ್ಯುತ್ ಗುತ್ತಿಗೆದಾರನ ಬಳಿ ದಿನಗೂಲಿ ಕೆಲಸ ಮಾಡುತ್ತಿದ್ದರು. ಕಂಬವೇರಿ ರಿಪೇರಿ ಮಾಡುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.

ಮೃತನ ಸಂಬಂಧಿಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಮೃತನ ಸಂಬಂಧಿಕರು ಹಾಗೂ ಗ್ರಾಮಸ್ಥರು ಗುತ್ತಿಗೆದಾರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ‌ ಎಂದು ಆರೋಪಿಸಿ ನಂಜನಗೂಡು ಚಾಮರಾಜನಗರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು. ತಕ್ಷಣ ಸ್ಥಳಕ್ಕಾಗಮಿಸಿದ ಕೌಲಂದೆ ಪೋಲಿಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ABOUT THE AUTHOR

...view details