ಆನೇಕಲ್: ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರಿನ ಹತ್ತಕ್ಕು ಹೆಚ್ಚು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದ ಕಳ್ಳನ ಆರೋಪಿಯ ಕಾಲಿಗೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಕೃಷ್ಣ, ಕಳ್ಳತನದ ಅಡ್ಡದಾರಿ ಹಿಡಿದಿದ್ದ ಎಂದು ಆತನ ಮೇಲೆ ಕಳ್ಳತನ, ಕಿಡ್ನ್ಯಾಪ್, ಬೆದರಿಕೆ ಮತ್ತು ದರೋಡೆ ಆಪಾದನೆಯ ಪ್ರಕರಣಗಳು ದಾಖಲಾಗಿದ್ದವು.
ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈತನನ್ನು ಬಂಧಿಸಲು ಬೆಟ್ಟದಾಸನಪುರ ಬಳಿ ತೆರಳಿದ್ದರು. ಪೊಲೀಸರನ್ನು ಕಂಡು ಪರಾರಿಯಾಗಲು ಯತ್ನಿಸಿದ್ದಾನೆ. ಆಗ ಎಸ್ಐ ಅಯ್ಯಪ್ಪನಿ ಮೇಲೆ ಕೃಷ್ಣ, ತನ್ನ ಬಳಿಯಿದ್ದ ಚಾಕುವಿನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಇನ್ಸ್ಪೆಕ್ಟರ್ ಕಿಶೋರ್, ಕೃಷ್ಣನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ತಿಳಿಸಿದ್ದಾರೆ.
ಸದ್ಯ ಆರೋಪಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಪಾದಿತನ ಮೇಲಿರುವ ಆರೋಪಗಳ ಬಗ್ಗೆ ವಿಚಾರಣೆ ನಡೆಯಲಿದೆ.