ಭಿಂದ್( ಮಧ್ಯಪ್ರದೇಶ):ವ್ಯಕ್ತಿಯೊಬ್ಬ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ನಡೆದಿದೆ.
ತನ್ನ ಮೂವರು ಪುತ್ರಿಯರೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ - ಮಧ್ಯಪ್ರದೇಶದ ಭಿಂದ್ ಜಿಲ್ಲೆ
10, 8 ಮತ್ತು 5 ವರ್ಷದ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪುತ್ರಿಯರೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ
ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ತಲುಪಿ ಗ್ರಾಮಸ್ಥರ ಸಹಾಯದಿಂದ ನಾಲ್ವರ ಮೃತದೇಹಗಳನ್ನು ಬಾವಿಯಿಂದ ಹೊರತೆಗೆದಿದ್ದಾರೆ. ಮೃತರನ್ನು ಅಂಧಿಯಾರಿ ಗ್ರಾಮದ ರಾಜೇಶ್ ರಾಜಕ್ ಹಾಗೂ ಪುತ್ರಿಯರಾದ ಅನುಷ್ಕಾ (10), ಚಾಯ್ನಾ (8), ಸಂಧ್ಯಾ (5) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ದಮೋಹ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ.