ನಲ್ಗೊಂಡ(ತೆಲಂಗಾಣ): ಕಾರು ಪಲ್ಟಿಯಾಗಿ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಹೈದರಾಬಾದ್-ನಾಗಾರ್ಜುನಸಾಗರ ರಸ್ತೆಯಲ್ಲಿ ಸಂಭವಿಸಿದೆ.
ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ - Nalgonda district
ತೆಲಂಗಾಣದ ನಲ್ಗೊಂಡ ಜಿಲ್ಲೆಯ ಹೈದರಾಬಾದ್-ನಾಗಾರ್ಜುನಸಾಗರ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.
ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ
ಮೃತರ ಪೈಕಿ ಮೂವರನ್ನು ಭರತ್, ನಾಗೇಂದ್ರ, ಗಣೇಶ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ಕೈಗೊಂಡಿದ್ದಾರೆ.
ನಿದ್ರೆಯ ಮಂಪರಿನಲ್ಲಿ ಹಾಗೂ ವೇಗವಾಗಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.