ಲಖನೌ: ಉತ್ತರ ಪ್ರದೇಶದ ಮೌ ಜಿಲ್ಲೆಯ ಮೊಹಮ್ಮದಾಬಾದ್ ಗೊಹ್ನಾ ಬ್ಲಾಕ್ನ ಮಾಜಿ ಅಧ್ಯಕ್ಷ ಅಜೀತ್ ಸಿಂಗ್ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಘಟನೆಯಲ್ಲಿ ಇವರ ಇಬ್ಬರು ಸಹಚರರು ಗಾಯಗೊಂಡಿದ್ದಾರೆ.
ವಿಭೂತಿ ಖಾಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ 8.45ರ ಸುಮಾರಿಗೆ ಬೈಕ್ನಲ್ಲಿ ಬಂದ ಮೂವರು ಬಂದೂಕುಧಾರಿಗಳು ಕೃತ್ಯ ಎಸಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.