ಕರ್ನಾಟಕ

karnataka

ETV Bharat / jagte-raho

ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ನೇಹಿತರ ದುರ್ಮರಣ - Gwalior road accident

ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ಮಧ್ಯಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

Four friends died after a car fell into a ditch in Gwalior
ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ನೇಹಿತರ ದುರ್ಮರಣ

By

Published : Dec 21, 2020, 11:41 AM IST

ಗ್ವಾಲಿಯರ್ (ಮಧ್ಯಪ್ರದೇಶ): ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ.

ಗ್ವಾಲಿಯರ್​ ಜೌರಸಿ ಪ್ರದೇಶದ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಇನ್ನೋರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಮೃತರನ್ನು ಶಿವಂ ಪುತ್ರ ಶರ್ಮಾ (30), ನವಜೋತ್ ಸಿಖ್ (27), ಶಿವಂ ಖಾಗಟ್​ (30), ಕಾರ್ತಿಕ್ ಪಾಲೀವಾಲ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಮೃತಪಟ್ಟ ಸವಾರ

ಇವರೆಲ್ಲರೂ ಸ್ನೇಹಿತರಾಗಿದ್ದು, ಕಾರಿನಲ್ಲಿ ಗ್ವಾಲಿಯರ್​ನಿಂದ ದಬ್ರಾಗೆ ತೆರಳುತ್ತಿದ್ದರು. ಜೌರಸಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಅವಘಡ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದಬ್ರಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details