ಬುಲಂದ್‌ಶಹರ್ (ಉತ್ತರ ಪ್ರದೇಶ):ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು, ಅನೇಕರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಬುಲಂದ್‌ಶಹರ್ ಜಿಲ್ಲೆಯ ಜೀತ್‌ಗಢಿ ಎಂಬ ಗ್ರಾಮದಲ್ಲಿ ಅಕ್ರಮವಾಗಿ ಸ್ಥಳೀಯ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಇದನ್ನು ಕುಡಿದವರೆಲ್ಲಾ ಅನಾರೋಗ್ಯಕ್ಕೆ ತುತ್ತಾಗಿದ್ದು, ಗಂಭೀರವಾಗಿದ್ದ ನಾಲ್ವರು ಮೃತಪಟ್ಟಿದ್ದಾರೆ.