ಬಿಜ್ನೋರ್ (ಉತ್ತರ ಪ್ರದೇಶ): ಕಾರು ಹಳ್ಳಕ್ಕೆ ಬಿದ್ದು ನಾಲ್ವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿನ ರಿಲಯನ್ಸ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಕಾರು ಹಳ್ಳಕ್ಕೆ ಬಿದ್ದು ನಾಲ್ವರ ದುರ್ಮರಣ - ನೆಹತೌರ್ ಠಾಣಾ ಪೊಲೀಸರು
ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕಾರು ಹಳ್ಳಕ್ಕೆ ಬಿದ್ದು ನಾಲ್ವರ ದುರ್ಮರಣ
ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಕಾರನ್ನು ಹಳ್ಳದಿಂದ ಹೊರತೆಗೆದಿದ್ದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಮೃತರಲ್ಲಿ ಮೂವರನ್ನು ಬರೇಲಿ ನಿವಾಸಿಗಳಾದ ಚೋಟು, ರಾಜು, ಇಸ್ರಾರ್ ಎಂದು ಹಾಗೂ ಗಾಯಗೊಂಡವರನ್ನು ಹನೀಫ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ನೆಹತೌರ್ ಠಾಣಾ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.