ಜಾರ್ಖಂಡ್:ಪತಿ, ಪತ್ನಿ ಸೇರಿ ನಾಲ್ವರು ಕೊಲೆಯಾಗಿರುವ ಘಟನೆ ಜಾರ್ಖಂಡ್ನ ಗುಮ್ಲಾ ಜಿಲ್ಲೆಯ ಡೆರಂಗ್ಡಿಹ್ ಎಂಬ ಗ್ರಾಮದಲ್ಲಿ ನಡೆದಿದೆ.
ದಂಪತಿ ಸೇರಿ ಒಂದೇ ಗ್ರಾಮದ ನಾಲ್ವರ ಬರ್ಬರ ಹತ್ಯೆ! - jharkhand crime
ಪತಿ, ಪತ್ನಿ ಸೇರಿ ಒಂದೇ ಗ್ರಾಮದ ನಾಲ್ವರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಒಂದೇ ಗ್ರಾಮದ ನಾಲ್ವರ ಬರ್ಬರ ಹತ್ಯೆ
ಸೋಮವಾರ ರಾತ್ರಿ ಘಟನೆ ನಡೆದಿದ್ದು, ಅಕ್ರಮ ಸಂಬಂಧದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ರೈದಿಹ್ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.