ಬೆಂಗಳೂರು:ಜೂಜಾಟ ತಡೆಯಬೇಕಾದ ಆರಕ್ಷಕರೇ ಆರೋಪಿಗಳೊಂದಿಗೆ ಸೇರಿ ಅಂದರ್ ಬಾಹರ್ ಆಡಿದ ಅರೋಪದಡಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿ ನಗರ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಆದೇಶ ಹೊರಡಿಸಿದ್ದಾರೆ.
ಆರೋಪಿಗಳೊಂದಿಗೆ ಸೇರಿ ಜೂಜಾಟ, ಇಬ್ಬರು ಪೊಲೀಸ್ ಕಾನ್ಸ್ಟೇಬಲ್ ಅಮಾನತು
ಕಳೆದ ಅಕ್ಟೋಬರ್ 19ರಂದು ಜೆಪಿ ನಗರದ ಖಾಸಗಿ ಹೋಟೆಲ್ನಲ್ಲಿ ಅಂದರ್ ಬಾಹರ್ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಇನ್ಸಪೆಕ್ಟರ್ ಆರ್.ಎಸ್. ಚೌಧರಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಇಬ್ಬರು ಕಾನ್ಸಟೇಬಲ್ ಸೇರಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಿ 52 ಸಾವಿರ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದರು.
ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲೇಶ್ ಹಾಗೂ ಗವಿಸಿದ್ದೇಶ್ ಅಮಾನತುಗೊಂಡ ಕಾನ್ಸ್ಟೇಬಲ್ಗಳು. ಕಳೆದ ಅಕ್ಟೋಬರ್ 19ರಿಂದ ಜೆಪಿ ನಗರದ ಖಾಸಗಿ ಹೋಟೆಲ್ನಲ್ಲಿ ಅಂದರ್ ಬಾಹರ್ ಆಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪುಟ್ಟೇನಹಳ್ಳಿ ಇನ್ಸ್ಪೆಕ್ಟರ್ ಆರ್.ಎಸ್. ಚೌಧರಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಇಬ್ಬರು ಕಾನ್ಸ್ಟೇಬಲ್ ಸೇರಿದಂತೆ 9 ಮಂದಿ ಆರೋಪಿಗಳನ್ನು ಬಂಧಿಸಿ, 52 ಸಾವಿರ ರೂಪಾಯಿ ವಶಕ್ಕೆ ಪಡೆದುಕೊಂಡಿದ್ದರು.
ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಮಲ್ಲೇಶ್ ಹಾಗೂ ಗವಿಸಿದ್ದೇಶ್ ಪೊಲೀಸರು ಎಂದು ಗೊತ್ತಾಗಿದೆ. ಈ ಬಗ್ಗೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ ಪಾಟೀಲ ಅವರ ಗಮನಕ್ಕೆ ತರಲಾಯಿತು. ಈ ಬಗ್ಗೆ ಆಂತರಿಕ ತನಿಖೆ ನಡೆಸಿ ಜೂಜಾಟ ಆಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ.