ಗುನಾ (ಮಧ್ಯಪ್ರದೇಶ): ಮುಂಬೈನಿಂದ ಲಖನೌಗೆ ಗ್ಯಾಂಗ್ಸ್ಟರ್ನನ್ನು ಕರೆದೊಯ್ಯುವ ವೇಳೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಪೊಲೀಸರ ಬೆಂಗಾವಲು ವಾಹನ ಪಲ್ಟಿಯಾಗಿ ಗ್ಯಾಂಗ್ಸ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪೊಲೀಸ್ ಬೆಂಗಾವಲು ವಾಹನ ಪಲ್ಟಿಯಾಗಿ ಗ್ಯಾಂಗ್ಸ್ಟರ್ ಸಾವು - ಉತ್ತರ ಪ್ರದೇಶ ಪೊಲೀಸ್
ಗ್ಯಾಂಗ್ಸ್ಟರ್ನನ್ನು ಮುಂಬೈನಿಂದ ಲಖನೌಗೆ ಕರೆತರುವ ವೇಳೆ ಪೊಲೀಸರ ಬೆಂಗಾವಲು ವಾಹನ ಪಲ್ಟಿಯಾಗಿ ಆತ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ನಡೆದಿದೆ.
ಪೊಲೀಸ್ ಬೆಂಗಾವಲು ವಾಹನ ಪಲ್ಟಿ
ಗ್ವಾಲಿಯರ್-ಬೇತುಲ್ ರಾಷ್ಟ್ರೀಯ ಹೆದ್ದಾರಿ ಬಳಿ ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸರು ಸೇರಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ರಾಜ್ಗರ್ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಫಿರೋಜ್ ಖಾನ್ ಮೃತ ಗ್ಯಾಂಗ್ಸ್ಟರ್. ಉತ್ತರ ಪ್ರದೇಶ ಮೂಲದ ಈತನ ವಿರುದ್ಧ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಸಮಾಜ ವಿರೋಧಿ ಚಟುವಟಿಕೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈತನನ್ನು ಮುಂಬೈನಿಂದ ಲಖನೌಗೆ ಕರೆತರುವ ವೇಳೆ ಅಪಘಾತ ಸಂಭವಿಸಿದೆ ಎಂದು ಗುನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.