ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಬ್ಲಾಸ್ಟ್: ಓರ್ವ ಸಾವು
ಸಿಲಿಂಡರ್ ಬ್ಲಾಸ್ಟ್
07:56 May 22
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಸಿಲಿಂಡರ್ ಬ್ಲಾಸ್ಟ್: ಓರ್ವ ಸಾವು
ಸೇಡಂ: ನಸುಕಿನ ಜಾವದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಕಲಬುರಗಿಯ ಸೇಡಂ ಪಟ್ಟಣದಲ್ಲಿ ಜರುಗಿದೆ.
ಪಟ್ಟಣದ ಮೊಮಿನಪುರಾ ಬಡಾವಣೆಯ ರಾಜು ತಾಯಿತ್ ಎಂಬುವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸಿಲಿಂಡರ್ ಸ್ಫೋಟಗೊಂಡ ರಭಸಕ್ಕೆ ಮನೆಯಲ್ಲಿರುವ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
Last Updated : May 22, 2020, 11:50 AM IST