ಚೆನ್ನೈ:ವಿಮಾನ ನಿಲ್ದಾಣದಲ್ಲಿ ಸುಮಾರು 38.9 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ ಚೆನ್ನೈ ವಿಮಾನ ನಿಲ್ದಾಣದ ತೆರಿಗೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಆರೋಪಿಯನ್ನು ಶಾಹುಲ್ ಹಮೀದ್ (40) ಎಂದು ಗುರುತಿಸಲಾಗಿದ್ದು, ಈತ ತಮಿಳುನಾಡಿನ ಪಸಿಪತ್ತಿನಮ್ಗೆ ಸೇರಿದವನಾಗಿದ್ದಾನೆ. ದುಬೈನಿಂದ ಇಂಡಿಗೋ ವಿಮಾನದಲ್ಲಿ ಆರೋಪಿ ಆಗಮಿಸಿದ್ದು, ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.