ಹಾಸನ:ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾತನಾಡಿದ ಎಸ್ಪಿ ರಾಮನಿವಾಸ್ ಸಪೆಟ್ ಅವರು, ಕಳೆದ ತಿಂಗಳ 24ರಂದು ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಸತೀಶ್ ಎಂಬಾತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಆರೋಪಿ ಹೊಳೆನರಸೀಪುರ ಹಾಗೂ ಚನ್ನರಾಯಪಟ್ಟಣದಲ್ಲಿ 8 ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಂಧಿತರಿಂದ 184ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ಸುಮಾರು 8,74,000 ರೂ. ಎಂದು ಹೇಳಿದ್ದಾರೆ.