ಹಥ್ರಾಸ್: ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ದಲಿತ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಸಂತ್ರಸ್ತೆಯ ಗ್ರಾಮವಾದ ಬುಲ್ಗಡಿಗೆ ಭೇಟಿ ನೀಡುವ ಸಾಧ್ಯತೆಯಿದೆ.
ಭಾನುವಾರ ಸಿಬಿಐ ತಂಡ ಹಥ್ರಾಸ್ಗೆ ಬಂದಿದ್ದು, ಚಂದಪಾ ಪೊಲೀಸ್ ಠಾಣೆಯಿಂದ ಪ್ರಕರಣಕ್ಕೆ ಸಂಬಂಧಿಸಿದ ಕೆಲ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಇಂದು ಬುಲ್ಗಡಿ ಗ್ರಾಮಕ್ಕೆ ಭೇಟಿ ನೀಡಬಹುದು. ಇವರೊಂದಿಗೆ ವಿಧಿವಿಜ್ಞಾನ ತಂಡ ಕೂಡ ಪರಿಶೀಲನೆಗೆ ಬರಬಹುದು ಎಂದು ಹಥ್ರಾಸ್ ಪೊಲೀಸ್ ವರಿಷ್ಠಾಧಿಕಾರಿ ವಿನೀತ್ ಜೈಸ್ವಾಲ್ ಹೇಳಿದ್ದಾರೆ.