ಕರ್ನಾಟಕ

karnataka

ETV Bharat / jagte-raho

ಹಥ್ರಾಸ್​ ಯುವತಿ ಮೇಲೆ ಅತ್ಯಾಚಾರವಾಗಿಲ್ಲ: ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಹಿರಂಗ - Uttar Pradesh crime

ಅಲಿಗರ್​ ಆಸ್ಪತ್ರೆ ನೀಡಿರುವ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಹಥ್ರಾಸ್‌ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆದಿಲ್ಲ. ಆದರೆ ಗಾಯದ ಗುರುತುಗಳಿವೆ ಎಂದು ಹೇಳಲಾಗಿದೆ. ಹೀಗಾಗಿ ನಾವು FSL ವರದಿಗಾಗಿ ಕಾಯುತ್ತಿದ್ದೇವೆ ಎಂದು ಎಸ್​ಪಿ ವಿಕ್ರಾಂತ್​ ವೀರ್ ತಿಳಿಸಿದ್ದಾರೆ.

Hathras
ಹಥ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ

By

Published : Oct 1, 2020, 1:05 PM IST

ಹಥ್ರಾಸ್: ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ನಡೆದ 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಇದೀಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಯುವತಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ಮರಣೋತ್ತರ ಪರೀಕ್ಷಾ ವರದಿ ತಿಳಿಸಿರುವುದಾಗಿ ಹಥ್ರಾಸ್ ಎಸ್​ಪಿ ವಿಕ್ರಾಂತ್​ ವೀರ್​ ಮಾಹಿತಿ ನೀಡಿದ್ದಾರೆ.

ಅಲಿಗರ್​ ಆಸ್ಪತ್ರೆ ನೀಡಿರುವ ವರದಿಯಲ್ಲಿ ಸಂತ್ರಸ್ತೆ ಮೇಲೆ ಅತ್ಯಾಚಾರ ನಡೆದಿಲ್ಲ. ಆದರೆ ಗಾಯದ ಗುರುತುಗಳಿವೆ ಎಂದು ಹೇಳಲಾಗಿದೆ. ಹೀಗಾಗಿ ನಾವು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿಗಾಗಿ ಕಾಯುತ್ತಿದ್ದೇವೆ ಎಂದು ಎಸ್​ಪಿ ತಿಳಿಸಿದ್ದಾರೆ.

ಸೆಪ್ಟಂಬರ್​ 14ರಂದು ಉತ್ತರ ಪ್ರದೇಶದ ಹಥ್ರಾಸ್‌ನಲ್ಲಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು, ಬರ್ಬರವಾಗಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸಂತ್ರಸ್ತೆ ದೆಹಲಿಯ ಸಫ್ತರ್​ಜಂಗ್​ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.

ABOUT THE AUTHOR

...view details