ಮುಂಬೈ : ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ಇಂದು ಮುಂದುವರೆಸಲಿದೆ. ಹಾಗೆಯೇ ಗೋಸ್ವಾಮಿಯನ್ನು ಪೊಲೀಸ್ ಕಸ್ಟಡಿಗೆ ನೀಡದೇ ಇದ್ದಿದ್ದನ್ನು ಪ್ರಶ್ನಿಸಿ ರಾಯಗಢ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ಸಹ ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದೆ.
ಅರ್ನಬ್ ಗೋಸ್ವಾಮಿ, ರಾಯಗಢ ಪೊಲೀಸರ ಅರ್ಜಿ ವಿಚಾರಣೆ ಇಂದು - 2018ರ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣ
ಆತ್ಮಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಮಹಾರಾಷ್ಟ್ರದ ರಾಯಗಢ ಪೊಲೀಸರು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಇಂದು ಬಾಂಬೆ ಹೈಕೋರ್ಟ್ ನಡೆಸಲಿದೆ..
2018ರ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆ ಪ್ರಕರಣ ಸಂಬಂಧ ಅರ್ನಬ್ ಗೋಸ್ವಾಮಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದರು. ಆರೋಪಿಗಳನ್ನು ನವೆಂಬರ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಅಲಿಬಾಗ್ ನ್ಯಾಯಾಲಯವು ಆದೇಶ ನೀಡಿತ್ತು.
ಇತ್ತ ಅರ್ನಬ್ ತನ್ನ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನಿನ್ನೆ ನಡೆಸಿದ್ದು, ವಿಚಾರಣೆಯನ್ನು ಇಂದಿಗೆ ಮುಂದೂಡಿತ್ತು. ಅತ್ತ ಗೋಸ್ವಾಮಿಯನ್ನು ಪೊಲೀಸ್ ಕಸ್ಟಡಿಗೆ ನೀಡದೇ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಅಲಿಬಾಗ್ ಕೋರ್ಟ್ನ ಆದೇಶವನ್ನು ಪ್ರಶ್ನಿಸಿ ರಾಯಗಢ ಪೊಲೀಸರು ಕೂಡ ಅರ್ಜಿ ಸಲ್ಲಿಸಿದ್ದರು.