ಹಾಸನ/ಚನ್ನರಾಯಪಟ್ಟಣ: ದುಷ್ಕರ್ಮಿವೋರ್ವ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಪಟ್ಟಣದ ರೇಣುಕಾಂಬ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಬೈಕ್‌ಗೆ ಬೆಂಕಿ ಹಚ್ಚಿ ಪರಾರಿಯಾದ ಭೂಪ... ಸಿಸಿಟಿವಿಯಲ್ಲಿ ವಿಡಿಯೋ ಸೆರೆ - ಸಿಸಿಟಿವಿ ವಿಡಿಯೋ
ಮನೆ ಮುಂದೆ ನಿಲ್ಲಿಸಿದ ಬೈಕ್‌ಗೆ ದುಷ್ಕರ್ಮಿವೋರ್ವ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಇದರ ವಿಡಿಯೋ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೈಕಿಗೆ ಬೆಂಕಿ ಹಚ್ಚಿದ ಭೂಪ
ಪಟ್ಟಣದ ಎಂಜಿ ಗ್ರಾಫಿಕ್ಸ್ ಮಾಲೀಕ ಮುಬಾಷಿರ್ ಮಹಮದ್ ಅವರಿಗೆ ಸೇರಿದ ಬಜಾಜ್ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.ತಡರಾತ್ರಿ ರಾತ್ರಿ 12.30ರ ಸುಮಾರಿಗೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ನ ಪೆಟ್ರೋಲ್ ಪೈಪ್ ತೆಗೆದು ಬೆಂಕಿಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ.ಇದರ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಚನ್ನರಾಯಪಟ್ಟಣ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.