ದಾವಣಗೆರೆ:ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಗಿಡ್ಡನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಪ್ರೀತಿಸಿ ಮದುವೆ: ಗರ್ಭಿಣಿ ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಆತ್ಮಹತ್ಯೆಗೆ ಶರಣಾದ ಪತಿ! - ಜಗಳೂರು
ಪತ್ನಿಯನ್ನು ಮಚ್ಚಿನಿಂದ ಕೊಲೆ ಮಾಡಿದ ಪತಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಲಕ್ಷ್ಮೀ (20) ಕೊಲೆಗೀಡಾದ ಮಹಿಳೆಯಾಗಿದ್ದು, ಚಂದ್ರಪ್ಪ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಕಳೆದ ಒಂದೂವರೆ ವರ್ಷದ ಹಿಂದೆ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಇವರ ಮಧ್ಯೆ ಆಗಾಗ ಗಲಾಟೆ ನಡೆಯುತಿತ್ತು. ಕುರಿ ಕಾಯುತ್ತಾ ಜೀವನ ಸಾಗಿಸುತ್ತಿದ್ದ ಚಂದ್ರಪ್ಪ ಹಾಗೂ ಲಕ್ಷ್ಮೀ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ವಿಕೋಪಕ್ಕೆ ತಿರುಗಿದ್ದು, ಚಂದ್ರಪ್ಪನು ಪತ್ನಿಯ ಕುತ್ತಿಗೆಯ ಎಡಭಾಗಕ್ಕೆ ಮಚ್ಚು ಬೀಸಿದ್ದಾನೆ. ಬೀಸಿದ ರಭಸಕ್ಕೆ ಆಕೆಯ ಕುತ್ತಿಗೆ ತುಂಡರಿಸಿದೆ. ಬಳಿಕ ಹೆಂಡತಿ ಸಾವನ್ನಪ್ಪಿದ್ದನ್ನು ಕಂಡು ಆತನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮೃತ ಲಕ್ಷ್ಮೀ 7 ತಿಂಗಳ ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ಎಸ್ಪಿ ಹನುಮಂತರಾಯ, ಜಗಳೂರು ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.