ನೆಲಮಂಗಲ:ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.
ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿಗಳ ಪರೇಡ್ ನಡೆಸಿ ಎಚ್ಚರಿಕೆ ಕೊಟ್ಟ ಡಿವೈಎಸ್ಪಿ - warned-of-rowdy-parade
ಉಪ ವಿಭಾಗ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅಪರಾಧ ಕೃತ್ಯಗಳು ಹೆಚ್ಚಾದ ಹಿನ್ನೆಲೆ ನೆಲಮಂಗಲ ಉಪ ವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಲಾಯಿತು.
ನೆಲಮಂಗಲ ವ್ಯಾಪ್ತಿಯಲ್ಲಿ ಹೆಚ್ಚಾದ ಅಪರಾಧ ಕೃತ್ಯ: ರೌಡಿ ಪೆರೇಡ್ ನಡೆಸಿ ಎಚ್ಚರಿಕೆ ನೀಡಿದ ಡಿವೈಎಸ್ಪಿ
80ಕ್ಕೂ ಹೆಚ್ಚು ರೌಡಿಶೀಟರ್ಗಳನ್ನ ಕರೆಸಿದ್ದ ಪೊಲೀಸ್ ಅಧಿಕಾರಿಗಳು, ಅಪರಾಧ ಹಿನ್ನೆಲೆಯ ವ್ಯಕ್ತಿಗಳಿಗೆ ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು. ಅಪರಾಧ ಕೃತ್ಯದಲ್ಲಿ ಭಾಗವಹಿಸಿದ್ದು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.