ನೋಯ್ಡಾ( ಉತ್ತರಪ್ರದೇಶ): ನಿರ್ಮಾಣ ಹಂತದಲ್ಲಿದ್ದ ಕಟ್ಟಡದ 4ನೇ ಮಹಡಿಯಿಂದ ಬಿದ್ದು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಗ್ರೇಟರ್ ನೋಯ್ಡಾದ ಬಿಸ್ರಖ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಹುಮಹಡಿ ಕಟ್ಟಡದಿಂದ ಬಿದ್ದು ಕಾರ್ಮಿಕನ ಮಗು ಸಾವು - ಗ್ರೇಟರ್ ನೋಯ್ಡಾ ಡಿಸಿಪಿ ಅಂಕುರ್ ಅಗರ್ವಾಲ್
ಪೋಷಕರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ವೇಳೆ 4ನೇ ಮಹಡಿಯಿಂದ ಬಿದ್ದು 4 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ.
ಬಹುಮಹಡಿ ಕಟ್ಟಡ
ಮೃತ ಮಗುವಿನ ಪೋಷಕರು ಕಾರ್ಮಿಕರಾಗಿದ್ದು, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವ ವೇಳೆ ಘಟನೆ ನಡೆದಿದೆ ಎಂದು ಗ್ರೇಟರ್ ನೋಯ್ಡಾ ಡಿಸಿಪಿ ಅಂಕುರ್ ಅಗರ್ವಾಲ್ ತಿಳಿಸಿದ್ದಾರೆ.
ಬಾಲಕನ ಪೋಷಕರಿಂದ ಈವರೆಗೆ ಯಾವುದೇ ದೂರು ಬಂದಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.