ರಾಂಚಿ (ಜಾರ್ಖಂಡ್):ಬಹುಕೋಟಿ ಮೇವು ಹಗರಣದಲ್ಲಿ ಜೈಲುಪಾಲಾಗಿರುವ ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಬಹುಕೋಟಿ ಮೇವು ಹಗರಣದ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್ ಜೈಲುಪಾಲಾಗಿದ್ದರು. ಈ ಮೂರು ಪ್ರಕರಣಗಳಲ್ಲಿ ಇಂದು 1992-93ರಲ್ಲಿ ಲಾಲೂ ಅವರು ಬಿಹಾರದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಚೈಬಾಸ ಖಜಾನೆಯಿಂದ 33.67 ಕೋಟಿ ರೂ.ಗಳನ್ನು ವಂಚಿಸಿದ ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ. ಆದರೆ ಡುಮ್ಕಾ ಖಜಾನೆ ಪ್ರಕರಣ ಇನ್ನೂ ಬಾಕಿ ಇರುವುದರಿಂದ ಲಾಲೂ ಪ್ರಸಾದ್ರ ಜೈಲುವಾಸ ಮುಂದುವರೆಯಲಿದೆ.