ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ ಬಿಡ್ಕಿನ್ ಗ್ರಾಮದ ಮಸೀದಿ ಬಳಿ ಜನ ಸೇರಿರುವ ವಿಷಯ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಧಾರ್ಮಿಕ ಸ್ಥಳದಲ್ಲಿ ಗುಂಪು ಸೇರಿದ್ದ ಜನ... ಸ್ಥಳಕ್ಕೆ ತೆರಳಿದ ಪೊಲೀಸರ ಮೇಲೆ ಕಲ್ಲು ತೂರಾಟ - ಧಾರ್ಮಿಕ ಸ್ಥಳದಲ್ಲಿ ಗುಂಪು ಸೇರಿದ್ದ ಜನ
ಮಸೀದಿ ಬಳಿ ಜನ ಸೇರಿರುವ ಬಗ್ಗೆ ಬಂದಿದ್ದ ಮಾಹಿತಿಯನ್ನು ಪರಿಶೀಲಿಸಲು ತೆರಳಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಓರ್ವ ಅಧಿಕಾರಿ ಗಾಯಗೊಂಡಿದ್ದಾರೆ.
ಪ್ರಾರ್ಥನೆ ಸಲ್ಲಿಸಲು ಮಸೀದಿ ಬಳಿ ಸುಮಾರು 35 ರಿಂದ 40 ಜನರು ಸೇರಿರುವ ಬಗ್ಗೆ ಬಿಡ್ಕಿನ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಈ ವೇಳೆ ಪರಿಶೀಲಿಸಲು ಪೊಲೀಸರ ತಂಡ ಸ್ಥಳಕ್ಕೆ ತೆರಳಿದಾಗ ಅವರ ಮೇಲೆ ಕಲ್ಲು ತೂರಾಟ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೋಕ್ಷದಾ ಪಾಟೀಲ್ ಮಾಹಿತಿ ನೀಡಿದ್ದಾರೆ.
ಸೋಮವಾರ ಸಂಜೆ 7:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸ್ ಅಧಿಕಾರಿಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ 15 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ರಂಜಾನ್ ಸಮಯದಲ್ಲಿ ಮನೆಯಲ್ಲೇ ಪ್ರಾರ್ಥನೆ ಸಲ್ಲಿಸುವಂತೆ 2 ದಿನಗಳ ಹಿಂದೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮನವಿ ಮಾಡಿದ್ದರು.