ಮುದ್ದೇಬಿಹಾಳ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಘಟನೆಯು ತಾಲೂಕಿನ ಹಿರೇಮುರಾಳ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟವ ನಾಲತವಾಡನ ವೀರೇಶ್ ಪೇಟಕರ (29) ಎಂದು ಗುರುತಿಸಲಾಗಿದೆ.

ಗಾಯಾಳುಗಳಾದ ಮುತ್ತು ರುದ್ರಗಂಟಿ, ಬಸಯ್ಯ ತೆಗ್ಗಿನಮಠ ಪೈಕಿ ಚಾಲಕ ಬಸಯ್ಯನ ಸ್ಥಿತಿ ಗಂಭೀರವಾಗಿದೆ. ಮುದ್ದೇಬಿಹಾಳದಿಂದ ನಾಲತವಾಡಕ್ಕೆ ತೆರಳುತ್ತಿದ್ದಾಗ, ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿ ಮರಕ್ಕೆ ಗುದ್ದಿದೆ.
ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್ಐ ಮಲ್ಲಪ್ಪ ಮಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.