ಕರ್ನಾಟಕ

karnataka

ETV Bharat / jagte-raho

ವಿವಾಹೇತರ ಸಂಬಂಧ ಆರೋಪ: ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮಸ್ಥರು - ಅಸ್ಸೋಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆ

ಅಸ್ಸೋಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ಗ್ರಾಮವೊಂದರಲ್ಲಿ ವಿವಾಹೇತರ ಸಂಬಂಧ ಇಟ್ಟುಕೊಂಡ ಆರೋಪದಡಿ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಹೊಡೆದು ಗ್ರಾಮಸ್ಥರು ಹತ್ಯೆಗೈದಿದ್ದಾರೆ.

One lynched to death in Assam
ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

By

Published : Feb 9, 2021, 9:33 AM IST

ಗುವಾಹಟಿ(ಅಸ್ಸೋಂ): ವಿವಾಹೇತರ ಸಂಬಂಧ ಇಟ್ಟುಕೊಂಡ ಆರೋಪದಡಿ 40 ವರ್ಷದ ವ್ಯಕ್ತಿಯನ್ನು ಗ್ರಾಮಸ್ಥರು ಥಳಿಸಿ ಕೊಲೆ ಮಾಡಿರುವ ಘಟನೆ ಅಸ್ಸೋಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯ ರಾಸಿ ಬೇ ಎಂಬ ಗ್ರಾಮದಲ್ಲಿ ನಡೆದಿದೆ.

ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮಸ್ಥರು

ಮೃತ ವ್ಯಕ್ತಿಯನ್ನು ಅದೇ ಗ್ರಾಮದ ಮಾನ್​ಸಿಂಗ್​ ರೊಂಗ್ಪಿ ಎಂದು ಗುರುತಿಸಲಾಗಿದೆ. ಈತ ಮಹಿಳೆವೋರ್ವಳ ಜೊತೆ ಖಾಸಗಿ ಕ್ಷಣದಲ್ಲಿದ್ದ ವೇಳೆ, ಆಕೆಯ ಮಗ ಹಾಗೂ ಗ್ರಾಮಸ್ಥರು ದಾಳಿ ನಡೆಸಿದ್ದಾರೆ. ಮಾನ್​ಸಿಂಗ್​ನನ್ನು ಕಂಬಕ್ಕೆ ಕಟ್ಟಿ ಹಾಕಿ ಮನಬಂದಂತೆ ಹೊಡೆದಿದ್ದಾರೆ.

ಇದನ್ನೂ ಓದಿ: ಟ್ರಕ್​​ ಮತ್ತು ಪಿಕ್​ ಅಪ್​ ವಾಹನ ಮುಖಾಮುಖಿ ಡಿಕ್ಕಿ: 6 ಮಂದಿ ದುರ್ಮರಣ

ತಡರಾತ್ರಿ ಘಟನೆ ನಡೆದಿದ್ದು, ಬೆಳಗ್ಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಆರು ಮಂದಿಯನ್ನು ಬಂಧಿಸಿದ್ದಾರೆ.

ABOUT THE AUTHOR

...view details