ಮಂಡ್ಯ: ಶಿವರಾತ್ರಿ ನಂತರ ಜಿಲ್ಲೆಯಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಚಾಕು ಇರಿತ ಪ್ರಕರಣದ ನಂತರ ಮತ್ತೊಂದು ಬರ್ಬರ ಹತ್ಯೆ ನಡೆದ ಪ್ರಕರಣ ಬೆಳಕಿಗೆ ಬಂದಿದೆ.
ಶ್ರೀರಂಗಪಟ್ಟಣದಲ್ಲಿ ಮಂಗಳಮುಖಿಯ ಬರ್ಬರ ಹತ್ಯೆ! - murder case news
ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣದ ನಂತರ ಮತ್ತೊಂದು ಬರ್ಬರ ಹತ್ಯೆ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳಮುಖಿಯನ್ನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಬರ್ಬರ ಹತ್ಯೆ
ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿ ಬಳಿಯ ಅಗ್ನಿಶಾಮಕ ಠಾಣೆ ಹತ್ತಿರ ಮಂಗಳಮುಖಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿ, ವಿವರ ಕಲೆ ಹಾಕಲಾಗುತ್ತಿದ್ದಾರೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.