ಮುಜಾಫರ್ಪುರ (ಬಿಹಾರ): 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಲು ಯತ್ನಿಸಿರುವ ಘಟನೆ ಬಿಹಾರದ ಮುಜಾಫರ್ಪುರ ಜಿಲ್ಲೆಯಲ್ಲಿ ನಡೆದಿದೆ.
ಜನವರಿ 4ರಂದು ಬಾಲಕಿ ಕೋಚಿಂಗ್ ಕ್ಲಾಸ್ಗೆ ತೆರಳಿದ್ದ ವೇಳೆ ಆಕೆಯನ್ನು ಅಪಹರಿಸಿದ್ದ ಆರೋಪಿಗಳು ಮನೆಯೊಂದಕ್ಕೆ ಹೊತ್ತೊಯ್ದು ಕೃತ್ಯ ಎಸಗಿದ್ದಾರೆ. ಸಂತ್ರಸ್ತೆಯನ್ನು ಕೊಲ್ಲಲು ಮುಂದಾಗಿದ್ದು, ಆಕೆ ಅಲ್ಲಿಂದ ತಪ್ಪಿಸಿಕೊಂಡಿದ್ದಾಳೆ.