ಕರ್ನಾಟಕ

karnataka

ETV Bharat / jagte-raho

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ: ಆರೋಪಿ ಪರಾರಿ - Mathura crime news

ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಆರೋಪಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ.

UP rape case
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ

By

Published : Sep 1, 2020, 11:54 AM IST

ಮಥುರಾ (ಉತ್ತರಪ್ರದೇಶ): ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಉತ್ತರಪ್ರದೇಶದ ಮಥುರಾ ಜಿಲ್ಲೆಯ ಯಮುನಾಪಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಾನ್ವಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿಯ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆ ಹಿನ್ನೆಲೆ:

ಬಾಲಕಿಯ ನೆರೆ ಮನೆಯವನಾದ ಬನ್ವಾರಿ ಎಂಬಾತ ತನ್ನೊಂದಿಗೆ ಅಪ್ರಾಪ್ತೆಯನ್ನು ನಿನ್ನೆ ಮಾರುಕಟ್ಟೆಗೆ ಕರೆದೊಯ್ದಿದ್ದ. ರಾತ್ರಿಯಾದರೂ ಬಾಲಕಿ ಬರದೆ ಇದ್ದದ್ದನ್ನು ಕಂಡ ಕುಟುಂಬದವರು ಆಘಾತಕ್ಕೆ ಒಳಗಾಗಿದ್ದರು. ಈ ಬೆನ್ನಲ್ಲೇ ಬಾಲಕಿಯ ಶವ ಪತ್ತೆಯಾಗಿದ್ದು, ಆರೋಪಿ ಬನ್ವಾರಿ ಪರಾರಿಯಾಗಿದ್ದಾನೆ.

ಸದ್ಯ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಇದರ ಜೊತೆಗೆ ಅಪರಾಧಿಯ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ABOUT THE AUTHOR

...view details