ಕರ್ನಾಟಕ

karnataka

ETV Bharat / jagte-raho

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪ್ರಾಪ್ತ ವಶಕ್ಕೆ - ಫತೇಪುರ್​ ಅತ್ಯಾಚಾರ ಸುದ್ದಿ

ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Teen held for raping 5-year-old in UP's Fatehpur
ಅತ್ಯಾಚಾರ

By

Published : Oct 25, 2020, 3:05 PM IST

ಫತೇಪುರ್​​ (ಉತ್ತರ ಪ್ರದೇಶ):5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ 13 ವರ್ಷದ ಬಾಲಕನನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯ ಖಾಗಾ ಪ್ರದೇಶದ ಗ್ರಾಮವೊಂದರಲ್ಲಿ ನಿನ್ನೆ ಘಟನೆ ನಡೆದಿತ್ತು. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹುಡುಗ ಕೃತ್ಯ ಎಸಗಿದ್ದನು. ಸ್ಥಳೀಯರೇ ಈ ವಿಷಯವನ್ನು ಇತ್ಯರ್ಥಗೊಳಿಸಲು ಪ್ರಯತ್ನಿಸಿದ್ದಾರೆ. ಆದರೆ ಸಂತ್ರಸ್ತೆಯ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಎಫ್‌ಐಆರ್ ದಾಖಲಿಸಿಕೊಂಡು 24 ಗಂಟೆಗಳಲ್ಲೇ ಆರೋಪಿಯನ್ನು ವಶಕ್ಕೆ ಪಡೆದಿದ್ದೇವೆ. ಆರೋಪಿಯ ವಿರುದ್ಧ ಐಪಿಸಿಯ ಸೆಕ್ಷನ್ 376 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಖಾಗಾ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಆರ್.ಕೆ.ಸಿಂಗ್ ತಿಳಿಸಿದ್ದಾರೆ.

ABOUT THE AUTHOR

...view details