ಹುಬ್ಬಳ್ಳಿ: ವಾಯುವ್ಯ ಸಾರಿಗೆ ಬಸ್ವೊಂದು ಓವರ್ ಟೇಕ್ ಭರದಲ್ಲಿ ಪಲ್ಟಿಯಾಗಿದೆ. ತಾಲೂಕಿನ ಕುಸುಗಲ್ ಗ್ರಾಮದ ಇಂಗಳಳ್ಳಿ ಕ್ರಾಸ್ ಬಳಿ ಈ ಘಟನೆ ನಡೆದಿದೆ.
ಓವರ್ಟೇಕ್ ಭರದಲ್ಲಿ ಸಾರಿಗೆ ಬಸ್ ಪಲ್ಟಿ... 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ - ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿ
ವಾಯುವ್ಯ ಸಾರಿಗೆ ಬಸ್ವೊಂದು ಓವರ್ ಟೇಕ್ ಮಾಡುವ ಭರದಲ್ಲಿ ಪಲ್ಟಿಯಾದ ಘಟನೆ ಕುಸುಗಲ್ ಗ್ರಾಮದ ಇಂಗಳಳ್ಳಿ ಕ್ರಾಸ್ ಬಳಿ ನಡೆದಿದೆ.
![ಓವರ್ಟೇಕ್ ಭರದಲ್ಲಿ ಸಾರಿಗೆ ಬಸ್ ಪಲ್ಟಿ... 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ KN_HBL_03_Bus_Pulti_av_KA10025](https://etvbharatimages.akamaized.net/etvbharat/prod-images/768-512-6401350-thumbnail-3x2-chai---copy.jpg)
ಓವರ್ ಟೇಕ್ ಮಾಡಲು ಭರದಲ್ಲಿ ಸಾರಿಗ್ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಇಳಕಲ್ ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಕುದುರೆ ಗಾಡಿಯನ್ನು ಓವರ್ ಟೆಕ್ ಮಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಬೇಟಿ ನೀಡಿದ್ದ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.