ಕರ್ನಾಟಕ

karnataka

ETV Bharat / jagte-raho

ಬಾಲಿವುಡ್​ ಡ್ರಗ್ಸ್​ ಕೇಸ್​: 18ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ ಎನ್​ಸಿಬಿ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದಂತೆ ಬಾಲಿವುಡ್ ಡ್ರಗ್ಸ್ ಪ್ರಕರಣ ಸಂಬಂಧ ನಿನ್ನೆ ಧರ್ಮ ಪ್ರೊಡಕ್ಷನ್ಸ್ ಕಾರ್ಯನಿರ್ವಾಹಕ ನಿರ್ಮಾಪಕ ಕ್ಷಿತಿಜ್ ರವಿ ಪ್ರಸಾದ್​ರನ್ನು ಅರೆಸ್ಟ್​ ಮಾಡಲಾಗಿದ್ದು, ಈವರೆಗೆ 18ಕ್ಕೂ ಹೆಚ್ಚು ಆರೋಪಿಗಳನ್ನು ಎನ್​ಸಿಬಿ ಬಂಧಿಸಿದೆ.

NCB
ಎನ್​ಸಿಬಿ

By

Published : Sep 27, 2020, 12:30 PM IST

ಮುಂಬೈ: ಬಾಲಿವುಡ್ ಡ್ರಗ್ಸ್​​ ಪ್ರಕರಣ ಸಂಬಂಧ ಈವರೆಗೆ 18ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಾದಕ ವಸ್ತು ನಿಯಂತ್ರಣ ದಳ (ಎನ್​​ಸಿಬಿ) ಮಾಹಿತಿ ನೀಡಿದೆ.

ಬಾಲಿವುಡ್​ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್ ಹಾಗೂ ದೀಪಿಕಾ ಮ್ಯಾನೇಜರ್ ಕರಿಷ್ಮಾ ಪ್ರಕಾಶ್​ರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಶನಿವಾರ ಧರ್ಮ ಪ್ರೊಡಕ್ಷನ್ಸ್ ಕಾರ್ಯನಿರ್ವಾಹಕ ನಿರ್ಮಾಪಕ ಕ್ಷಿತಿಜ್ ರವಿ ಪ್ರಸಾದ್​ರನ್ನು ಅರೆಸ್ಟ್​ ಮಾಡಲಾಗಿದ್ದು, ಈವರೆಗೆ 18ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಹೊಸದಾಗಿ ಯಾರಿಗೂ ಸಮನ್ಸ್​ ಜಾರಿಗೊಳಿಸಿಲ್ಲ ಎಂದು ನೈರುತ್ಯ ವಲಯದ ಎನ್‌ಸಿಬಿ ಉಪ ಮಹಾನಿರ್ದೇಶಕ ಮುತಾ ಅಶೋಕ್ ಜೈನ್ ತಿಳಿಸಿದ್ದಾರೆ.

ಜೂನ್​ 14ರಂದು ಮೃತಪಟ್ಟ ಬಾಲಿವುಡ್ ನಟ ಸುಶಾಂತ್​ ಸಿಂಗ್ ರಜಪೂತ್​ ಸಾವಿನ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ಭೇದಿಸಲಾಗುತ್ತಿದ್ದು, ಡ್ರಗ್ಸ್ ಲಿಂಕ್ ಕುರಿತ ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಅರೆಸ್ಟ್​ ಆಗಿರುವ ನಟಿ ರಿಯಾ ಚಕ್ರವರ್ತಿ ಸೇರಿದಂತೆ ಇತರ ಆರೋಪಿಗಳು ನೀಡಿದ ಹೇಳಿಕೆ ಮೇರೆಗೆ ಬಾಲಿವುಡ್ ಸೆಲೆಬ್ರಿಟಿಗಳಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿ ಖಾನ್, ರಕುಲ್ ಪ್ರೀತ್ ಸಿಂಗ್ ಮತ್ತು ಫ್ಯಾಷನ್​ ಡಿಸೈನರ್​​ ಸಿಮೋನೆ ಖಂಬಟ್ಟಾರನ್ನು ಸಿಸಿಬಿ ವಿಚಾರಣೆಗೊಳಪಡಿಸಿದೆ.

ABOUT THE AUTHOR

...view details