ರಾಣೆಬೆನ್ನೂರು: ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ-ಮಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಣೆಬೆನ್ನೂರಿನ ಮಾರುತಿ ನಗರದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ತಾಯಿ - ಮಗ : ತಾಯಿ ಸಾವು, ಪುತ್ರನ ಸ್ಥಿತಿ ಗಂಭೀರ - ಮಗ ಅರುಣಕುಮಾರ ಗಡ್ಡದ
ಕೌಟುಂಬಿಕ ಕಲಹ ಹಿನ್ನೆಲೆ ತಾಯಿ - ಮಗ ಆತ್ಮಹತ್ಯೆಗೆ ಯತ್ನಿಸಿದ್ದು, ಮಾರುತಿ ನಗರದ ಗಿರಿಜಾ ಗಡ್ಡದ (38) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಅರುಣಕುಮಾರ ಗಡ್ಡದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ.

ತಾಯಿ-ಮಗ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನ: ತಾಯಿ ಸಾವು, ಮಗನ ಸ್ಥಿತಿ ಗಂಭೀರ
ಮಾರುತಿ ನಗರದ ಗಿರಿಜಾ ಗಡ್ಡದ (38) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಗ ಅರುಣಕುಮಾರ ಗಡ್ಡದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದು, ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕೌಟುಂಬಿಕ ಕಲಹ ಹಿನ್ನೆಲೆ ತಾಯಿ -ಮಗ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ರಾಣೆಬೆನ್ನೂರು ಶಹರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.