ವಿಕಾರಾಬಾದ್ (ತೆಲಂಗಾಣ):ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಘಟನೆಯಲ್ಲಿ ಓರ್ವ ಮಗಳು ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ..ಬದುಕುಳಿದ ಬಾಲಕಿ - Vikarabad crime news
ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮೂವರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ
ಮೃತರನ್ನು ಯೆಲ್ಲಮ್ಮ (32), ರಾಜು (5), ರಾಜಿತಾ (9) ಎಂದು ಗುರುತಿಸಲಾಗಿದೆ. ಅನಿತಾ ಬದುಕುಳಿದ ಬಾಲಕಿ. ಕೌಟುಂಬಿಕ ಕಲಹದಿಂದ ಬೇಸತ್ತು ಯೆಲ್ಲಮ್ಮ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಅನಿತಾ ತಪ್ಪಿಸಿಕೊಂಡು ಅಳುತ್ತಾ ಓಡಿ ಬರುತ್ತಿರುವುದನ್ನು ಗ್ರಾಮಸ್ಥರು ಕಂಡಾಗ ವಿಚಾರ ತಿಳಿದು ಬಂದಿದೆ. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಹೊರ ತೆಗೆದಿದ್ದಾರೆ.