ಕರ್ನಾಟಕ

karnataka

ETV Bharat / jagte-raho

ಮಗು ಕೊಂದು ತಾಯಿ ಆತ್ಮಹತ್ಯೆ: ಕಾರಣ ನಿಗೂಢ - 3ವರ್ಷದ ಮಗು

ತಾಯಿಯೋರ್ವಳು ಮಗುವನ್ನು ಕೊಂದ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

mother-suicide-after-his-3-year-old-boy-murder-in-chamarajanagar-district
ಮಗು ಕೊಂದು ತಾಯಿ ಆತ್ಮಹತ್ಯೆ: ಕಾರಣ ನಿಗೂಢ

By

Published : Jun 12, 2020, 2:30 PM IST

ಚಾಮರಾಜನಗರ: ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.

23 ವರ್ಷದ ಸಂಗೀತಾ ಮೃತ ದುರ್ದೈವಿ. 3 ವರ್ಷದ ಕರಣ್‌ನನ್ನು ಕೊಂದ ಬಳಿಕ ನೀರಿಗೆ ಹಾರಿ ಸಾವಿಗೆ ಶರಣಾಗಿದ್ದಾಳೆ. ಮೃತಳು ಬೆಂಗಳೂರು ನಿವಾಸಿಯಾಗಿದ್ದು, ಕಳೆದ 6 ವರ್ಷದ ಹಿಂದೆ ಮಂಜು ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೆಳಗ್ಗೆ ಗ್ರಾಮದ ಮಹದೇಶ್ವರ ದೇಗುಲಕ್ಕೆ ತೆರಳುತ್ತೇನೆಂದು ಹೇಳಿ ಮನೆಯಿಂದ ಬಂದಿದ್ದಳು ಎನ್ನಲಾಗಿದ್ದು, ಸಾವಿಗೆ ಕಾರಣ ನಿಗೂಢವಾಗಿದೆ. ಸದ್ಯ, ಕೊಳ್ಳೇಗಾಲ ಗ್ರಾಮಾಂತರ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details