ಕರ್ನಾಟಕ

karnataka

ETV Bharat / jagte-raho

ಶಾಕಿಂಗ್​: ಬೆಂಗಳೂರಲ್ಲಿ ಹಾಡಹಗಲೇ ಪ್ರೇಯಸಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಗಲ್​ ಪ್ರೇಮಿ! - ಪ್ರಿಯತಮೆ ಮೇಲೆ ಹಲ್ಲೆ ಮಾಡಿದ ಪ್ರೇಮಿ ನ್ಯೂಸ್​

ಯುವಕನೋರ್ವ ತಾನು ಪ್ರೀತಿಸುತ್ತಿದ್ದ ಹುಡುಗಿ ಮೇಲೆ ಹಾಡಹಗಲೇ ಮಚ್ಚಿನಿಂದ ಹಲ್ಲೆ ಮಾಡಿದ್ದು, ಯುವತಿಯ ಕುತ್ತಿಗೆ, ತಲೆ, ಕಾಲು, ಹೊಟ್ಟೆ ಭಾಗಕ್ಕೆ ಐದಕ್ಕೂ ಹೆಚ್ಚು ಬಾರಿ ಚೂರಿಯಿಂದ ಇರಿದಿದ್ದಾನೆ. ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಪಾಗಲ್ ಪ್ರೇಮಿ
pagal lover who has onslaught on lover

By

Published : May 27, 2020, 3:38 PM IST

ಬೆಂಗಳೂರು: ಭಗ್ನ ಪ್ರೇಮಿಯೊಬ್ಬ ತನ್ನ ಪ್ರಿಯತಮೆಯನ್ನು ಹಾಡಹಗಲೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಯುವತಿ ಮೇಲೆ ಹಲ್ಲೆ ಮಾಡಿದ ಪಾಗಲ್ ಪ್ರೇಮಿ

ಗಿರೀಶ್ ಎಂಬ ಪಾಗಲ್ ಪ್ರೇಮಿ ಹಲ್ಲೆ ಮಾಡಿದ ಯುವಕ. ಮಂಡ್ಯದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವಾಗ ಯುವತಿಯೋರ್ವಳನ್ನು ಪ್ರೀತಿ‌ಸುತ್ತಿದ್ದ. ನಂತರ ಇತ್ತೀಚೆಗೆ ಯುವತಿ ಮಂಡ್ಯದಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಳು. ಆದರೆ ಕಳೆದ ಕೆಲವು ತಿಂಗಳಿಂದ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿ, ಜಗಳವಾಗಿ ಇಬ್ಬರೂ ದೂರವಾಗಿದ್ದರು. ದೂರವಾದರೂ ಸಹ ಗಿರೀಶ್ ಪ್ರೀತಿಸುವಂತೆ ಆಕೆಯನ್ನು ಪೀಡಿಸುತ್ತಿದ್ದನಂತೆ. ಯುವತಿ ನಿರಾಕರಿಸಿದ್ದಕ್ಕೆ ಮಂಡ್ಯದಿಂದ ಬಂದು ಇಂದು ಬೆಳಿಗ್ಗೆ 11.30ರ ಸುಮಾರಿಗೆ ಶಾಪಿಂಗ್​​ಗೆಂದು​ ಮನೆಯಿಂದ ಹೊರ ಬಂದಿದ್ದ ಯುವತಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಇನ್ನು ಹಲ್ಲೆಗೊಳಗಾದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಯುವತಿಯ ಕುತ್ತಿಗೆ, ತಲೆ, ಕಾಲು, ಹೊಟ್ಟೆ ಭಾಗಕ್ಕೆ ಮಚ್ಚಿನಿಂದ ಐದಕ್ಕೂ ಹೆಚ್ಚು ಬಾರಿ ಇರಿದಿದ್ದಾನೆ. ಹೀಗಾಗಿ ಯುವತಿಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಯುವತಿಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಯವಾಗಿತ್ತು. ಜೂನ್​​ನಲ್ಲಿ ಮದುವೆ ದಿನಾಂಕ ನಿಗದಿಯಾಗಿತ್ತು ಎಂದು ತಿಳಿದು ಬಂದಿದೆ. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ABOUT THE AUTHOR

...view details