ಕರ್ನಾಟಕ

karnataka

ETV Bharat / jagte-raho

ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಬರ್ಬರ ಕೊಲೆ - ಪೈದೊಡ್ಡಿ ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕೊಲೆ

ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ.

paidoddi-former-gramapanchayat-member-murder
ಪೈದೊಡ್ಡಿ ಕೊಲೆ ಪ್ರಕರಣ

By

Published : Aug 18, 2020, 10:30 PM IST

ರಾಯಚೂರು : ಹಳೆ ದ್ವೇಷದ ಹಿನ್ನೆಲೆ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಭೀಕರವಾಗಿ ಹತ್ಯೆಗೈಯಲಾಗಿದೆ.

ಹನುಮಂತಪ್ಪ ಯರಜಂತಿ (38) ಮೃತ ಗ್ರಾ.ಪಂ ಸದಸ್ಯ. ಬೈಕ್ ಮೇಲೆ ಬಂದ ಮೂವರು ದುಷ್ಕರ್ಮಿಗಳು ಗೌಡೂರು ಕ್ರಾಸ್ ಬಳಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಗ್ರಾಮ ಪಂಚಾಯಿತಿ ಮಾಜಿ ಸದಸ್ಯನ ಬರ್ಬರ ಕೊಲೆ

ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಸ್.ಎಸ್ ಹುಲ್ಲೂರು, ಸಿಪಿಐ ಯಸವಂತ ಬಿಸನಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ABOUT THE AUTHOR

...view details