ಮುಂಬೈ: ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಪ್ರಕರಣ ದಾಖಲಿಸಿರುವ ನಟಿ ಪಾಯಲ್ ಘೋಷ್ ಅವರನ್ನು ಮುಂಬೈನ ವೆರ್ಸೋವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ (ಮೀಟೂ) ಆರೋಪ ಮಾಡಿದ್ದ ನಟಿ ಪಾಯಲ್ ಘೋಷ್, ವೆರ್ಸೋವ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಕಶ್ಯಪ್ ಅವರಿಗೆ ನೋಟಿಸ್ ನೀಡಿದ್ದರು. ಹೀಗಾಗಿ ಇಂದು ಬೆಳಗ್ಗೆ ಕಶ್ಯಪ್ ವಿಚಾರಣೆಗೆ ಹಾಜರಾಗಿದ್ದರು.