ಕರ್ನಾಟಕ

karnataka

ETV Bharat / jagte-raho

ಟ್ರಾಕ್ಟರ್ ಡಿಕ್ಕಿ: ಸ್ಥಳದಲ್ಲೇ ಪಾದಚಾರಿ ಸಾವು - ಗೋಕಾಕ ಗ್ರಾಮೀಣ ಠಾಣೆಯಲ್ಲಿ ಪ್ರಕರಣ

ಕೊಣ್ಣೂರ ಗ್ರಾಮದಲ್ಲಿ ಗಂಗಾರಾಮ ಅವರು ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲಕ ಪರಾರಿಯಾಗಿದ್ದಾನೆ.

Pedestrian death on the spot

By

Published : Nov 16, 2019, 6:05 AM IST

ಗೋಕಾಕ: ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸಂಭವಿಸಿದೆ.

ಕೊಣ್ಣೂರ ಗ್ರಾಮದ ನಿವಾಸಿ ಪರಶುರಾಮ ಗಂಗಾರಾಮ ಬಡಿಗೇರ (35) ಎಂಬುವವರು ಮೃತಪಟ್ಟಿದ್ದಾರೆ. ಗಂಗಾರಾಮ ಅವರು ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಟ್ರಾಕ್ಟರ್ ಡಿಕ್ಕಿ ಹೊಡೆದಿದ್ದು, ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.

ಈ ಬಗ್ಗೆ ಗೋಕಾಕ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details