ಕರ್ನಾಟಕ

karnataka

ಹಣ ಕೊಡದಿದ್ದಕ್ಕೆ ವಾಹನಕ್ಕೆ ಬೆಂಕಿ: ಗುಂಡು ಹಾರಿಸಿ ದರೋಡೆಕೋರರನ್ನು ಬಂಧಿಸಿದ ಪೊಲೀಸರು

By

Published : Nov 12, 2019, 4:45 PM IST

ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿವೆ ಇಬ್ಬರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರ ಗುಂಡೇಟಿಗೆ ಇಬ್ಬರು ದರೋಡೆಕೋರರು ಅಂದರ್..

ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಮತ್ತೆ ಪೊಲೀಸರ ಗುಂಡು ಸದ್ದು ಮಾಡಿವೆ ಇಬ್ಬರು ದರೋಡೆಕೋರರ ಮೇಲೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶ್ರೀನಿವಾಸ್ ಎಂಬುವವ ಬಳಿ ದುಷ್ಕರ್ಮಿಗಳು 50 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಅಷ್ಟು ಮಾತ್ರವಲ್ಲದೇ ಹಣ ಕೊಡದಿದ್ದರೆ ವಾಹನಗಳಿಗೆ ಬೆಂಕಿ ಹಚ್ಚುವುದಾಗಿ ತಿಳಿಸಿದ್ದಾರೆ. ಈ ವೇಳೆ ಶ್ರೀನಿವಾಸ್ ಹಣ ಕೊಡಲ್ಲಾ ಎಂದಾಗ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ವಿದ್ದಾರೆ. ಈ ವಿಚಾರ ತಿಳಿದು ಖುದ್ದಾಗಿ ಸ್ಥಳಕ್ಕೆ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿ ತನಿಖೆಗೆ ತಂಡ ರಚನೆ ಮಾಡಿದ್ದರು.

ಆರೋಪಿಗಳು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ಶಿವಸ್ವಾಮಿ ತಮಿಳುನಾಡು ಮೂಲದ ಭಾಸಿತ್ ಹಾಗೂ ರಿಯಾಜ್ ನನ್ನ ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ‌. ಪೇದೆಗಳಾದ ಮಲ್ಲಿಕಾರ್ಜುನ್ ಹಾಗೂ ಶ್ರೀನಿವಾಸ್ ಗೆ ಹಲ್ಲೆ ಮಾಡಿದ್ದಾರೆ‌ . ತಮ್ಮ ಆತ್ಮರಕ್ಷಣೆಗಾಗಿ ಆರೋಪಿಗಳ ಮೇಲೆ ಪೈರ್ ಮಾಡಿ ಬಂಧಿಸಿದ್ದಾರೆ ಸದ್ಯ ಆರೋಪಿಗಳು ಹಾಗೂ ಗಾಯಗೊಳಗಾದ ಪೊಲೀಸರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

ABOUT THE AUTHOR

...view details