ಬಳ್ಳಾರಿ: ಜಿಲ್ಲೆಯಲ್ಲಿ ಬಾಲಕಿಯೊಬ್ಬಳ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಸಂಡೂರು ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ - ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ
ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಯನ್ನು ಸಂಡೂರು ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

arrest
ಹುಲುಗಪ್ಪ (28) ಬಂಧಿತ. ಬಾಲಕಿ ಹೊಟ್ಟೆ ನೋವು ಎಂದು ಬಳಲುತ್ತಿದ್ದ ಹಿನ್ನೆಲೆ ಪೋಷಕರು ಆರೋಗ್ಯ ಪರೀಕ್ಷೆ ಮಾಡಿಸಿದಾಗ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ.
ನಂತರ ಪೊಲೀಸರು ವಿಚಾರ ಮಾಡಿದಾಗ ಹುಲುಗಪ್ಪ ಎಂಬುವವರು ಅತ್ಯಾಚಾರ ನಡೆಸಿದ ಸಂಗತಿ ಹೊರಬಿದ್ದಿದೆ. ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಸಂಡೂರು ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.